ಮಂಗಳೂರು: ಹೆಚ್ಚುತ್ತಿರುವ ಅಧಿಕ ದೇಹ ತೂಕದ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಆವಿಷ್ಕಾರ ಯೋಗ ಸಂಸ್ಥೆಯ ವತಿಯಿಂದ ವಿದ್ಯಾರ್ಥಿ–ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರಿಗಾಗಿ ಆಗಸ್ಟ್ 17ರಿಂದ 22ರವರೆಗೆ ವಿಶೇಷ ಯೋಗ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ, ಭಾರತದಲ್ಲಿ ಅಧಿಕ ದೇಹ ತೂಕದ ಸಮಸ್ಯೆ ಹೆಚ್ಚುತ್ತಿದ್ದು, ಅದರಲ್ಲೂ ಯುವಜನರಲ್ಲಿ ಈ ಪ್ರಮಾಣ ಹೆಚ್ಚುತ್ತಿರುವುದು ಭವಿಷ್ಯದ ಆರೋಗ್ಯದ ದೃಷ್ಟಿಯಿಂದ ಆತಂಕಕಾರಿ ಬೆಳವಣಿಗೆಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯಕರ ಜೀವನಶೈಲಿಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆವಿಷ್ಕಾರ ಯೋಗ ಸಂಸ್ಥೆ ಈ ವಿಶೇಷ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ತರಬೇತಿಯ ಸಂದರ್ಭದಲ್ಲಿ ಅಧಿಕ ದೇಹ ತೂಕ ನಿಯಂತ್ರಣಕ್ಕೆ ಸಹಕಾರಿಯಾಗುವ ಯೋಗಾಸನಗಳು, ಸೂರ್ಯ ನಮಸ್ಕಾರ, ವಿವಿಧ ಕ್ರಿಯೆಗಳು, ಪ್ರಾಣಾಯಾಮ, ವಿಶ್ರಾಂತಿ ಹಾಗೂ ಧ್ಯಾನ ಸೇರಿದಂತೆ ಹಲವು ಯೋಗಾಭ್ಯಾಸಗಳನ್ನು ಕಲಿಸಲಾಗುತ್ತದೆ. ಇದರೊಂದಿಗೆ ಸಾತ್ವಿಕ ಆಹಾರ ಪದ್ಧತಿ ಮತ್ತು ಆರೋಗ್ಯಕರ ಜೀವನಶೈಲಿಯ ಕುರಿತು ಮಾರ್ಗದರ್ಶನ ನೀಡಲಾಗುವುದು.
ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಆವಿಷ್ಕಾರ ಯೋಗದ ಬಿಜೈ, ಯೆಯ್ಯಾಡಿ, ಬಂಟ್ಸ್ ಹಾಸ್ಟೆಲ್ ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳು ಹಾಗೂ ಹಾಸ್ಟೆಲ್‌ಗಳಲ್ಲಿ ಆಯೋಜಿಸಲಾಗಿದೆ. ಆಸಕ್ತರು ತಮ್ಮ ಅನುಕೂಲಕ್ಕೆ ತಕ್ಕಂತೆ ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ. ಆನ್‌ಲೈನ್ ತರಬೇತಿಯ ಸೌಲಭ್ಯವೂ ಲಭ್ಯವಿದೆ.
ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು, ಯುವಜನರು ಹಾಗೂ ಸಾರ್ವಜನಿಕರು ಈ ಉಚಿತ ತರಬೇತಿಯ ಸದುಪಯೋಗ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ನೊಂದಾವಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ:
📞 9845588740
📞 9591130105
Post a Comment