ಸೌಹಾರ್ದನಗರದ ಮಸ್ಜಿದ್ ರಹ್ಮಾನ್‌ನಲ್ಲಿ ವಿಜೃಂಭಣೆಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ನ್ಯೂ ಸೈಟ್, ಸೌಹಾರ್ದನಗರ ಮಸ್ಜಿದ್ ರಹ್ಮಾನ್ ಮಸೀದಿ ಆವರಣದಲ್ಲಿ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆ ಹಾಗೂ ಸಡಗರದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಸೀದಿಯ ಉಸ್ತಾದರು, ಆಡಳಿತ ಸಮಿತಿಯ ಸದಸ್ಯರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಊರಿನ ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಲಾಯಿತು. ದೇಶಭಕ್ತಿ, ಸೌಹಾರ್ದತೆ ಹಾಗೂ ಸಹಬಾಳ್ವೆಯ ಸಂದೇಶ ಸಾರುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

Post a Comment

Previous Post Next Post