ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು: ಕರಂಬಾರು ಶಾಲಾ ಮೈದಾನದಲ್ಲಿ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆ ಹಾಗೂ ಸಡಗರದಿಂದ ಆಚರಿಸಲಾಯಿತು.
ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಗುಣಪಾಲ್ ದೇವಾಡಿಗ ಧ್ವಜಾರೋಹಣ ನೆರವೇರಿಸಿದರು. ಬಳಿಕ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಲಾಯಿತು. ಮಕ್ಕಳಲ್ಲಿ ದೇಶಪ್ರೇಮದ ಭಾವನೆ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ ಎಂದು ಗುಣಪಾಲ್ ದೇವಾಡಿಗ ಹೇಳಿದರು.

ಕಾರ್ಯಕ್ರಮದಲ್ಲಿ ಕೌನ್ಸಿಲರ್ ದಿನೇಶ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ, ಶ್ರೀ ಮಾರಿಯಮ್ಮ ಕೋಟೆ ಬಬ್ಬು ಸ್ವಾಮಿ ದೈವಸ್ಥಾನದ ಅಧ್ಯಕ್ಷ ಜಗನ್ನಾಥ ಸಾಲ್ಯಾನ್, ನಮ್ಮ ಕ್ಲಿನಿಕ್ ಮಳವೂರು ವೈದ್ಯಾಧಿಕಾರಿ ಡಾ. ನಚಿಕೇತ, ನಾಗರಿಕ ಸೇವಾ ಸಮಿತಿ ಅಧ್ಯಕ್ಷ ಭೋಜರಾಜ್ ಕೋಟ್ಯಾನ್, ನಮ್ಮ ಜವನೆರ್ ಕರಂಬಾರು ಗೌರವಾಧ್ಯಕ್ಷ ರಮೇಶ್ ಸುವರ್ಣ, ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಕರಂಬಾರು ಅಧ್ಯಕ್ಷ ಲಕ್ಷ್ಮಣ್ ಬಂಗೇರ, ಸಾವಿತ್ರಿ ಟೀಚರ್, ಓಂಕಾರ್ ಫ್ರೆಂಡ್ಸ್ ಅಧ್ಯಕ್ಷ ಮನೋಜ್ ಶೆಟ್ಟಿ, ಪದ್ಮನಾಭ, ಶೋಭಾ ರೈ, ದಾನಿ ಧೀರಜ್ ಪೂಜಾರಿ, ಕೆಎಫ್‌ಸಿ ಅಧ್ಯಕ್ಷ ಜೀವನ್ ಶೆಟ್ಟಿ, ಎಸ್‌ಡಿಎಂಸಿ ಉಪಾಧ್ಯಕ್ಷೆ ಲಾವಣ್ಯ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ರಾಘವೇಂದ್ರ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ರಾಕೇಶ್ ಕುಂದರ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಆಚಾರ್ಯ, ಜೊತೆ ಕಾರ್ಯದರ್ಶಿ ಉಮೇಶ್ ಅಮಿನ್, ನೇತ್ರಕ್ಷಿ, ಶಿಕ್ಷಣ ಕಾರ್ಯದರ್ಶಿ ಅಕ್ಷಿತ್ ಶೆಟ್ಟಿ, ನವೀನ್ ಚಂದ್ರ ಸಾಲ್ಯಾನ್ ಹಾಗೂ ವಿನಯ್ ಸಾಲ್ಯಾನ್ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಸೀತಮ್ಮ ಸ್ವಾಗತಿಸಿದರು. ಗುಣವತಿ ವಂದಿಸಿದರು. ಉಷಾ ಎಂ. ಕಾರ್ಯಕ್ರಮ ನಿರೂಪಿಸಿದರು.

Post a Comment

Previous Post Next Post