Belthangady | ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಜಮಾಲುದ್ದೀನ್ ಬಂಧನ

ಬೆಳ್ತಂಗಡಿ: ಶಾಲೆಗೆ ತೆರಳಲು ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಗೆ ಅನುಚಿತವಾಗಿ ವರ್ತಿಸಿ, ಜೀವ ಬೆದರಿಕೆ ಹಾಕಿದ್ದಲ್ಲದೆ, ಬಳಿಕ ಮನೆಗೆ ಬಂದು ಬೆದರಿಸಿ ಅತ್ಯಾಚಾರವೆಸಗಿದ ಆರೋಪದ ಮೇಲೆ ವೇಣೂರು ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ವೇಣೂರು ನಿವಾಸಿ ಜಮಾಲುದ್ದೀನ್ ಆರೋಪಿ. ಬಾಲಕಿ ಕೆಲವು ತಿಂಗಳುಗಳಿಂದ ಆರೋಪಿಯ ರಿಕ್ಷಾದಲ್ಲಿ ಶಾಲೆಗೆ ಹೋಗಿ ಬರುತ್ತಿದ್ದಳು. ಈ ವೇಳೆ ಆರೋಪಿ ಅನುಚಿತವಾಗಿ ವರ್ತಿಸುತ್ತಿದ್ದ ಎನ್ನಲಾಗಿದ್ದು, ಬಾಲಕಿ ಇದನ್ನು ಪ್ರತಿರೋಧಿಸಿದಾಗ ಜೀವ ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಬಾಲಕಿ ಈ ವಿಚಾರವನ್ನು ಯಾರಿಗೂ ತಿಳಿಸಿರಲಿಲ್ಲ.

ಆ.13ರಂದು ಸಂಜೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಮನೆಗೆ ಬಂದ ಆರೋಪಿ ಆಕೆಯನ್ನು ಬೆದರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆ.15ರಂದು ಬಾಲಕಿ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಮಾಲುದ್ದೀನ್‌ನನ್ನು ಅದೇ ದಿನ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 56/2026ರಂತೆ BNS 2023ರ ಕಲಂ 75(2), 64(1), 65(1), 351(3) ಹಾಗೂ ಪೋಕ್ಸೋ ಕಾಯ್ದೆ-2012ರ ಕಲಂ 4(2), 8, 12ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

Previous Post Next Post