ಬಜಪೆ | ಪೆರ್ಮುದೆ ಸಮೀಪ ಮನೆ ಅಂಗಳಕ್ಕೆ ನುಗ್ಗಿ ಮಲಗಿದ್ದ ಶ್ವಾನವನ್ನು ಹೊತ್ತೊಯ್ದ ಚಿರತೆ

ಮಂಗಳೂರು: ಮನೆ ಅಂಗಳಕ್ಕೆ ಏಕಾಏಕಿ ನುಗ್ಗಿದ ಚಿರತೆಯೊಂದು ಅಲ್ಲೇ ಮಲಗಿದ್ದ ಶ್ವಾನವನ್ನು ಬಾಯಿಯಲ್ಲಿ ಹಿಡಿದುಕೊಂಡು ಹೊತ್ತೊಯ್ದ ಘಟನೆ ಮಂಗಳೂರು ಹೊರವಲಯದ ಬಜ್ಪೆ ಸಮೀಪದ ಪೆರ್ಮುದೆಯಲ್ಲಿ ನಡೆದಿದೆ.

ಪೆರ್ಮುದೆಯ ದಿವಂಗತ ಜಿ.ಕೆ. ನೋಣಯ್ಯ ಪೂಜಾರಿ ಅವರ ಮನೆಯ ಅಂಗಳಕ್ಕೆ ರಾತ್ರಿ ವೇಳೆ ಚಿರತೆ ನುಗ್ಗಿದೆ. ಮನೆಯ ಸಮೀಪ ಮಲಗಿದ್ದ ಶ್ವಾನದ ಮೇಲೆ ದಾಳಿ ನಡೆಸಿದ ಚಿರತೆ, ಅದನ್ನು ಬಾಯಿಯಲ್ಲಿ ಹಿಡಿದುಕೊಂಡು ಅಲ್ಲಿಂದ ತೆರಳಿದೆ.

ಚಿರತೆ ಶ್ವಾನವನ್ನು ಹೊತ್ತೊಯ್ಯುತ್ತಿರುವ ದೃಶ್ಯ ಮನೆಯ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸಂಪೂರ್ಣವಾಗಿ ಸೆರೆಯಾಗಿದೆ.

ರಾತ್ರಿ ವೇಳೆ ಮನೆ ಅಂಗಳಕ್ಕೇ ಚಿರತೆ ನುಗ್ಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಜನರು ರಾತ್ರಿ ವೇಳೆ ಮನೆಯಿಂದ ಹೊರಬರುವಾಗ ಎಚ್ಚರಿಕೆ ವಹಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆಯ ಚಲನವಲನದ ಬಗ್ಗೆ ಪರಿಶೀಲನೆ ನಡೆಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Post a Comment

Previous Post Next Post