ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ; ನಿವೃತ್ತ ಚಾಲಕರಿಗೆ ಸನ್ಮಾನ

ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ವಾಹನ ಚಾಲಕರ ಕೇಂದ್ರ ಸಂಘ (ರಿ.), ಬೆಂಗಳೂರು, ಜಿಲ್ಲಾ ಶಾಖೆ ಮಂಗಳೂರು ವತಿಯಿಂದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತ ವಾಹನ ಚಾಲಕರ ಸನ್ಮಾನ ಸಮಾರಂಭ ಮಂಗಳೂರಿನ ನಂದಿನಿ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಮಂಗಳೂರು ಜಿಲ್ಲಾ ಶಾಖೆಯ ಅಧ್ಯಕ್ಷ ಪದ್ಮನಾಭ ಜೋಗಿ ವಹಿಸಿದ್ದರು. ಸಂಘದ ರಾಜ್ಯಾಧ್ಯಕ್ಷ ಶ್ರೀನಿವಾಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್.ಆರ್. ತಿಮ್ಮಯ್ಯ ಹಾಗೂ ಭಾರತೀಯ ವೈದ್ಯಕೀಯ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಡಾ. ಸದಾನಂದ ಪೂಜಾರಿ ಉಪಸ್ಥಿತರಿದ್ದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ನವೀನ ಕುಮಾರ್ ಎಂ.ಎಸ್., ದಿ ಸೌತ್ ಕೆನರಾ ಗವರ್ನಮೆಂಟ್ ಆಫೀಸರ್ಸ್ ಕೋ-ಆಪರೇಟಿವ್ ಬ್ಯಾಂಕ್, ಮಂಗಳೂರಿನ ಅಧ್ಯಕ್ಷ ಅಂಬರೀಷ್ ಯು.ಹೆಚ್., ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಯೋಗೀಶ್ ದೇವಾಡಿಗ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಮಾಜಿ ಉಪಾಧ್ಯಕ್ಷ ಹರೀಶ್ ಕುಮಾರ್ ಭಾಗವಹಿಸಿದ್ದರು.

ಸಮಾರಂಭದಲ್ಲಿ ಸರ್ಕಾರಿ ಸೇವೆಯಲ್ಲಿ ಹಲವು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ವಾಹನ ಚಾಲಕರ ಸೇವೆಯನ್ನು ಸ್ಮರಿಸಲಾಯಿತು. ಅವರ ಸೇವೆಯನ್ನು ಗೌರವಿಸಿ ಸನ್ಮಾನಿಸಿ, ಸಂಘದ ವತಿಯಿಂದ ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಸರ್ವಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.

Post a Comment

Previous Post Next Post