ಹಾವೇರಿ | ಚಳಗೇರಿ ಟೋಲ್ ಬಳಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಮೂವರ ದುರ್ಮರಣ

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿಯ ನಿಸರ್ಗ ಡಾಬಾ ಮುಂಭಾಗ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಣೇಬೆನ್ನೂರಿನಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಸಿದ್ದಾರ್ಥ್ (27), ಹಸನ್ಮುಖಿ (29) ಹಾಗೂ ಯಶೋಧಾಬಾಯಿ (51) ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಸೌಂದರ್ಯ (26), ಸಿಂಧು (24) ಹಾಗೂ ಒಂದು ವರ್ಷದ ಮಗು ಕಶ್ವಶ್ರೀ ಗಾಯಗೊಂಡಿದ್ದು, ಅವರನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಹಾಗೂ ಗಾಯಾಳುಗಳು ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆಯ ನಿವಾಸಿಗಳು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ರಾಣೇಬೆನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Post a Comment

Previous Post Next Post