ಮಂಗಳೂರು: ಸುರತ್ಕಲ್ ಹೋಬಳಿಯ ಕುಂಜತ್ತಬೈಲ್‌ನಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶೀಘ್ರ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದ ನಿಯೋಗವು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಆ.21ರಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ನೇತೃತ್ವದಲ್ಲಿ ನಿಯೋಗವು ಸಚಿವರನ್ನು ಭೇಟಿ ಮಾಡಿ, ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಮನವಿ ಮಾಡಿತು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಸಂಜೀವ ಕೋಟ್ಯಾನ್, ಗೌರವಾಧ್ಯಕ್ಷ ರಘುನಾಥ ಅತ್ತಾವರ, ಉಪಾಧ್ಯಕ್ಷ ಅಣ್ಣು ಕುಂಜತ್ತ್ ಬೈಲ್, ಚೈತನ್ಯ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಕೃಷ್ಣ ಸೂಟರ್ ಪೇಟೆ, ಜಿಲ್ಲಾ ವಕ್ತಾರ ರಾಮ್ ಕುಮಾರ್ ಹಾಗೂ ಸದಸ್ಯ ಅಕ್ಷಯ್ ಗೇರುಕಟ್ಟೆ ಉಪಸ್ಥಿತರಿದ್ದರು.
Post a Comment