ಮಂಗಳೂರು: ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ತಾಜಾ ಮೀನುಗಳನ್ನು ಸಮಂಜಸ ದರದಲ್ಲಿ ಒದಗಿಸುವ ಉದ್ದೇಶದಿಂದ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಕದ್ರಿಯಲ್ಲಿ ನೂತನ ಮತ್ಸ್ಯದರ್ಶಿನಿ ಮೀನು ರೆಸ್ಟೋರೆಂಟ್ ಕ್ಯಾಂಟೀನ್‌ನ್ನು ಶನಿವಾರ ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಸಂತೋಷ್ ಕುಮಾರ್ ಉಪಸ್ಥಿತರಿದ್ದರು. ನಿಗಮದ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಮಹೇಶ್ ಕುಮಾರ್ ಹಾಗೂ ನಿಗಮದ ನಿವೃತ್ತ ಮಾಜಿ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ವಿ.ಕೆ. ಶೆಟ್ಟಿ ಅವರು ಭಾಗವಹಿಸಿದ್ದರು.
ಇವರೊಂದಿಗೆ ನಿಗಮದ ಇತರ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮೀನುಗಾರರ ಮುಖಂಡರಾದ ಚೇತನ್ ಬೆಂಗ್ರೆ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ನೂತನ ಮತ್ಸ್ಯದರ್ಶಿನಿ ಕ್ಯಾಂಟೀನ್ ಮೂಲಕ ಸಾರ್ವಜನಿಕರಿಗೆ ಗುಣಮಟ್ಟದ ತಾಜಾ ಮೀನು ಹಾಗೂ ಮೀನು ಖಾದ್ಯಗಳನ್ನು ಕೈಗೆಟುಕುವ ದರದಲ್ಲಿ ಒದಗಿಸುವ ಉದ್ದೇಶ ಹೊಂದಲಾಗಿದೆ.
Post a Comment