ಮಂಗಳೂರು: ದಕ್ಷಿಣ ಕನ್ನಡ ಫ್ಲವರ್ ಡೆಕೋರೇಷನ್ ಮಾಲಕರ ಸಂಘ (ರಿ.) ಮಂಗಳೂರು ಉತ್ತರ ವಲಯದ ತೃತೀಯ ಸಭೆಯು ಮೂಡುಶೆಡ್ಡೆ ಶ್ರೀ ಶಿವಶಕ್ತಿ ಭಜನಾ ಮಂದಿರದ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.
ಉತ್ತರ ವಲಯದ ಅಧ್ಯಕ್ಷ ನಿಶ್ಮಿತ್ ಶ್ರೀಯಾನ್ ಅವರು ಹಿಂದಿನ ಕಾರ್ಯಕ್ರಮಗಳ ವರದಿಯನ್ನು ಮಂಡಿಸಿದರು. ‘ಪುರ್ಪದ ಗೆಲ್ಮೆನ’ ಆಟಿ ಕಾರ್ಯಕ್ರಮ ಹಾಗೂ ಉಡುಪಿಯಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಗೆ ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಲಾಯಿತು.
ಉಪಾಧ್ಯಕ್ಷ ಅಬ್ದುಲ್ ರೆಹಮಾನ್, ಕಾರ್ಯದರ್ಶಿ ತಿಲಕ್ ರಾಜ್, ಸ್ಟ್ಯಾನಿ ಅಂಚನ್ ಹಾಗೂ ಸಂಘಟನಾ ಕಾರ್ಯದರ್ಶಿ ನವೀನಚಂದ್ರ ಉಪಸ್ಥಿತರಿದ್ದರು.
ಸಂಘವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಸದಸ್ಯರನ್ನು ಸೇರ್ಪಡೆಗೊಳಿಸುವ ಕುರಿತು ಚರ್ಚಿಸಲಾಯಿತು. ತಾಲೂಕು ಘಟಕವನ್ನು ಬಲಿಷ್ಠಗೊಳಿಸುವುದು ಹಾಗೂ ಸಂಘಟನೆಯ ಏಳಿಗೆಗಾಗಿ ಹಲವು ಮಹತ್ವದ ನಿರ್ಧಾರಗಳನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.
ಸಭೆಯಲ್ಲಿ ಉಪಸ್ಥಿತರಿದ್ದ ಗೌರವಾನ್ವಿತ ಸದಸ್ಯರು ಸಂಘದ ಮುಂದಿನ ಕಾರ್ಯಚಟುವಟಿಕೆಗಳು ಹಾಗೂ ಕೈಗೊಳ್ಳಬೇಕಾದ ವ್ಯವಸ್ಥೆಗಳ ಕುರಿತು ಹಲವು ಧನಾತ್ಮಕ ಸಲಹೆ ಮತ್ತು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಸ್ಟ್ಯಾನಿ ಅಂಚನ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯದರ್ಶಿ ತಿಲಕ್ ರಾಜ್ ಸ್ವಾಗತಿಸಿ ವಂದಿಸಿದರು.
ಈ ಸಂದರ್ಭದಲ್ಲಿ ‘ಡ್ರೀಮ್ ಇವೆಂಟ್ಸ್’ ಮತ್ತು ‘ಫೈರ್ ವರ್ಕ್ಸ್’ ಸಂಸ್ಥೆಗಳನ್ನು ಸಂಘದ ಹೊಸ ಸದಸ್ಯರಾಗಿ ಸೇರ್ಪಡೆಗೊಳಿಸಲಾಯಿತು.
Post a Comment