ಮೂಡುಬಿದಿರೆ: ತಾಲೂಕಿನ ನಿಡ್ಡೋಡಿ ಗ್ರಾಮದ ಬಂಗೇರಪದವು ಎಂಬಲ್ಲಿ ಕಲ್ಲಿನ ಕ್ವಾರಿಯಲ್ಲಿ ಕಲ್ಲು ಸಾಗಾಟಕ್ಕೆ ಬಳಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ನೀರು ತುಂಬಿದ್ದ ಕೋರೆಯೊಳಗೆ ಉರುಳಿ ಬಿದ್ದ ಘಟನೆ ನಡೆದಿದೆ.
ಕ್ವಾರಿಯಲ್ಲಿ ಕಲ್ಲು ಸಾಗಾಟದ ಕಾರ್ಯದಲ್ಲಿ ತೊಡಗಿದ್ದ ಲಾರಿ ಏಕಾಏಕಿ ನಿಯಂತ್ರಣ ತಪ್ಪಿ ನೀರು ತುಂಬಿದ್ದ ಕ್ವಾರಿ ಕೋರೆಗೆ ಬಿದ್ದಿದೆ ಎನ್ನಲಾಗಿದೆ. ಲಾರಿ ನೀರಿನಲ್ಲಿ ಮುಳುಗಿದರೂ ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನೆಯ ಬಳಿಕ ಕೋರೆಗೆ ಬಿದ್ದ ಲಾರಿಯನ್ನು ಮೇಲಕ್ಕೆತ್ತಲು ಕಾರ್ಯಾಚರಣೆ ನಡೆಸಲಾಯಿತು. ಲಾರಿ ನಿಯಂತ್ರಣ ತಪ್ಪಲು ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ಘಟನೆ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
Post a Comment