ಮಂಗಳೂರು (www.mooladhwani.in) : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಕರಾವಳಿ ಲೇಖಕಿಯರ ಹಾಗೂ ವಾಚಕಿಯರ ಸಂಘ, ಆಕೃತಿ ಆಶಯ ಪಬ್ಲಿಕೇಶನ್ ಸಹಯೋಗದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಅವರ 'ತುಳುವೆರೆ ತಿಂಗೊಲ್ದ ಪೊಲಬು' ಹಾಗೂ 'ಚಿತ್ತ ಭಿತ್ತಿಯ ಪತ್ತಾಯ' ಕೃತಿಗಳ ಲೋಕಾರ್ಪಣಾ ಕಾರ್ಯಕ್ರಮ ನ.5ರಂದು ಸಂಜೆ 4ಕ್ಕೆ ಉರ್ವದ ತುಳುಭವನದ ಸಿರಿ ಚಾವಡಿಯಲ್ಲಿ ನೆರವೇರಲಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಕುಂಬ್ರ ದುರ್ಗಾಪ್ರಸಾದ್ ರೈ, ಲೇಖಕ ಡಾ.ನರೇಂದ್ರ ರೈ ದೇರ್ಲ ಕೃತಿಗಳನ್ನು ಪರಿಚಯಿಸಲಿದ್ದಾರೆ.
ಹಿರಿಯ ಲೇಖಕಿ, ಸಂಶೋಧಕಿ ಬಿ.ಎಂ.ರೋಹಿಣಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕೃತಿಯ ಕರ್ತೃರಾದ ಶಕುಂತಳಾ ಟಿ.ಶೆಟ್ಟಿ, ಪ್ರಕಾಶಕರಾದ ಕಲ್ಲೂರು ನಾಗೇಶ್, ಕ.ಲೇ.ವಾ.ಸಂಘದ ಕಾರ್ಯದರ್ಶಿ ಕೃಷ್ಣವೇಣಿ, ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
Post a Comment