ಮಂಗಳೂರು: ಶರಧಿ ಪ್ರತಿಷ್ಠಾನ (ರಿ.), ಮಂಗಳೂರು ವತಿಯಿಂದ ಕರಾವಳಿ ಉತ್ಸವ ಸಮಿತಿ ಹಾಗೂ ಕರಾವಳಿ ಚಿತ್ರಕಲಾ ಚಾವಡಿ (ರಿ.) ಸಹಯೋಗದಲ್ಲಿ 2027ರ ಜನವರಿ 8, 9 ಮತ್ತು 10ರಂದು ಮಂಗಳೂರಿನಲ್ಲಿ ನಡೆಯಲಿರುವ ‘ಕಲಾಪರ್ಬ – ರಾಷ್ಟ್ರೀಯ ಕಲೋತ್ಸವ’ದ ಅಧಿಕೃತ ಪೋಸ್ಟರ್ ಬಿಡುಗಡೆಗೊಂಡಿತು.
ಮಂಗಳೂರಿನ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಕಲೋತ್ಸವದ ಪೋಸ್ಟರ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ರಾಷ್ಟ್ರೀಯ ಮಟ್ಟದ ಈ ಕಲೋತ್ಸವವು ಕರಾವಳಿ ಭಾಗದ ಕಲಾವಿದರಿಗೆ ಉತ್ತಮ ವೇದಿಕೆ ಕಲ್ಪಿಸುವುದರ ಜೊತೆಗೆ ವಿವಿಧ ಕಲಾ ಸಂಸ್ಕೃತಿಗಳ ವಿನಿಮಯ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡುವ ಮಹತ್ವದ ಅವಕಾಶವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಮೂರು ದಿನಗಳ ಕಾಲ ನಡೆಯಲಿರುವ ಈ ಚಿತ್ರಕಲಾ ಮೇಳದಲ್ಲಿ ಈ ಬಾರಿ ವಿಶೇಷ ಆಕರ್ಷಣೆಯಾಗಿ ಮಕ್ಕಳಿಂದ ವಿಶ್ವದಾಖಲೆ ಚಿತ್ರಕಲಾ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಕರಾವಳಿ ಚಿತ್ರಕಲಾ ಚಾವಡಿಯ ಅಧ್ಯಕ್ಷ ಕೋಟಿ ಪ್ರಸಾದ್ ಆಳ್ವ, ಗೌರವಾಧ್ಯಕ್ಷ ಗಣೇಶ ಸೋಮಯಾಜಿ, ಉಪಾಧ್ಯಕ್ಷ ಶರತ್ ಹೊಳ್ಳ, ಕಾರ್ಯದರ್ಶಿಗಳಾದ ಡಾ. ಜಯಪ್ರಕಾಶ್ ಬಿ. ಹಾಗೂ ಪುನೀಕ್ ಶೆಟ್ಟಿ, ಶರಧಿ ಪ್ರತಿಷ್ಠಾನದ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಕಲಾವಿದರಾದ ಈರಣ್ಣ ತಿಪ್ಪಣ್ಣವರ, ಜಾನ್ ಚಂದ್ರನ್ ಹಾಗೂ ಡಾ. ಝುಬೈರ್ ಖಾನ್ ಕುಡ್ಲ ಭಾಗವಹಿಸಿದ್ದರು. ಯೋಗ ಗುರು ಜಗದೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
Post a Comment