ಮಂಗಳೂರು ತಾಲೂಕಿನ ಬಜಪೆ ಸಮೀಪದ ಕೊಳಂಬೆ ಸಮೀಪದ ಪಾಲ್ದನೆ ತಿರುವು ಬಳಿಯಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆಗೈದು ಇಲ್ಲಿ ಎಸೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ನ.11ರಂದು ಮೃತದೇಹವೂ ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಮೂಲಗಳಿಂದ ದೊರೆತ ಮಾಹಿತಿಗಳ ಪ್ರಕಾರ ಮೃತನಾದ ವ್ಯಕ್ತಿಯೂ ಉತ್ತರ ಪ್ರದೇಶ ಮೂಲದವನಾಗಿದ್ದು, ಬಜಪೆಯಲ್ಲಿ ಉದ್ಯೋಗದಲ್ಲಿ ಇದ್ದನು ಎನ್ನಲಾಗಿದ್ದು, ಕಳೆದ ಹಲವು ದಿನಗಳಿಂದ ನಾಪತ್ತೆಯಾಗಿದ್ದ ಎನ್ನುವ ಮಾಹಿತಿಯೂ ಇದೆ.
ಈತನ ಪರಿಚಿತನೋರ್ವನ ಖಾತೆಗೆ ಹಣವನ್ನು ವರ್ಗಾಯಿಸಲಾಗಿದ್ದು, ಆ ವ್ಯಕ್ತಿಯೇ ಕೊಲೆಗೈದಿರುವ ಶಂಕೆ ಇದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎನ್ನುವ ಮಾಹಿತಿ ಇದೆ.
ಪೊಲೀಸರಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಸಿಗಬೇಕಿದ್ದು, ಘಟನೆ ನಡೆದು ಇಂದಿಗೆ ಎರಡು ದಿನಗಳಾಗಿವೆ ಆದರೂ ಅಧಿಕೃತ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
Post a Comment